ಯುವಕನ ಕೊಲೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಖಂಡನೆ
ಪುತ್ತೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲು ಬಳಿ ಕೋಮುವಾದಿಗಳು ಇಬ್ಬರು ಅಮಾಯಕರ ಮೇಲೆ ಹಲ್ಲೆ ನಡೆಸಿ ಅದರಲ್ಲಿ ಅಬ್ದುಲ್ ರಹಿಮಾನ್ ಎನ್ನುವ ಯುವಕ ದಾರುಣವಾಗಿ ಮೃತಪಟ್ಟಿದ್ದು ಘಟನೆಯನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ಖಂಡಿಸಿದ್ದಾರೆ.

ಕರಾವಳಿಯಲ್ಲಿ ಕೋಮು ಪ್ರಚೋದಿತ ಕೊಲೆಗಳು ಎಗ್ಗಿಲ್ಲದೆ ನಡೆಯುತ್ತಿದ್ದು ಕೋಮು ಪ್ರಚೋದಿತ ಭಾಷಣಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹುಟ್ಟಿಸುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲ್ಲದೆ ನಿರ್ಲಕ್ಷ್ಯವಹಿಸಿರುವುದೇ ಇದಕ್ಕೆ ಕಾರಣ, ಕೋಮುದ್ವೇಷ ಭಾಷಣಗಳನ್ನು ಕೊನೆಯಾಗಿಸದೆ ಕರಾವಳಿಯನ್ನು ಸಹಜ ಸ್ಥಿತಿಗೆ ತರಲು ಕಷ್ಟವಿದೆ. ಈ ಬಗ್ಗೆ ಸರಕಾರ ಗಂಭೀರವಾಗಿ ಪರಿಗಣಿಸಿ ಕ್ರಮ ತೆಗೆದುಕೊಂಡು ನ್ಯಾಯ ಒದಗಿಸಬೇಕು ಹಾಗೂ ಮೃತರಿಗೆ ಪರಿಹಾರವನ್ನು ನೀಡಬೇಕು. ಪೊಲೀಸ್ ಇಲಾಖೆಯು ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ಜನರು ಯಾವುದೇ ಉದ್ವೇಗಕ್ಕೆ ಒಳಗಾಗದೆ ಶಾಂತಿಯನ್ನು ಕಾಪಾಡಿಕೊಳ್ಳಬೇಕೆಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.