ಅಬ್ದುಲ್ ರಹಿಮಾನ್ ಬರ್ಬರ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದೀಪಕ್(21), ಅಮ್ಮುಂಜೆ ಗ್ರಾಮದ ಪೃಥ್ವಿರಾಜ್(21) ಮತ್ತು ಚಿಂತನ್(19) ಎಂದು ಗುರುತಿಸಲಾಗಿದೆ.
ಪೊಲೀಸರು ಮೂವರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದು ಉಳಿದ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿದು ಬಂದಿದೆ.