ಬಂಟ್ವಾಳ: ಹತ್ಯೆಗೀಡಾದ ರಹೀಂ ಮನೆಗೆ ದ.ಕ. ಖಾಝಿ ಭೇಟಿ
ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಬ್ದುಲ್ ರಹೀಂ ಅವರ ಕೊಳತ್ತಮಜಲು ಮನೆಗೆ ಇಂದು ದ.ಕ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಖಾಝಿಯವರು ಮಗ್ಫಿರತ್ ಗಾಗಿ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಲಂದರ್ ಶಾಫಿ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥನೆ ಮಾಡಿದರು.