ಕರಾವಳಿ

ದ.ಕ ಜಿಲ್ಲಾ ನೂತನ ಎಸ್ಪಿ  ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ (ಎಸ್.ಪಿ) ಡಾ. ಅರುಣ್ ಕೆ. ಐಪಿಎಸ್ ಅವರು ಇಂದು (ಮೇ 30, 2025) ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ಸರ್ಕಾರ ಹಾಗೂ ಪ್ರಧಾನ ಕಚೇರಿಯ ಆದೇಶದಂತೆ ಅವರು ಈ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿದ್ದಾರೆ.

ಅಧಿಕಾರ ವಹಿಸಿದ ಬೆನ್ನಲ್ಲೇ ಖಡಕ್ ಸಂದೇಶ ರವಾನಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಡಾ. ಅರುಣ್ ಕೆ., ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ತಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.
“ಮತೀಯ ಪ್ರಕರಣಗಳು ಮತ್ತು ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ರೌಡಿ ಶೀಟರ್‌ಗಳ ಚಲನವಲನಗಳ ಮೇಲೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.


ಜಿಲ್ಲೆಯಲ್ಲಿ ನಡೆಯುವ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಾ. ಅರುಣ್ ಕೆ. ಎಚ್ಚರಿಕೆ ನೀಡಿದರು. ಅಕ್ರಮ ಗೋಹತ್ಯೆ/ಸಾಗಾಟ, ಮಾದಕ ಪದಾರ್ಥಗಳ ಸಾಗಾಟ/ಮಾರಾಟ/ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ತಮ್ಮ ಮೊಬೈಲ್ ಸಂಖ್ಯೆ: 9480805301 ಅಥವಾ ಕಚೇರಿ ಸಂಖ್ಯೆ: 0824-2220503 ಗೆ ಮುಕ್ತವಾಗಿ ಮಾಹಿತಿ ನೀಡಲು ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!