ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಸಂದೇಶ ರವಾನೆ: ಮೂರು ಪ್ರಕರಣ ದಾಖಲು
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವ ಹಾಗೂ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುವಂತಹ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಮೇ.30ರಂದು ವೇಣೂರು ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ.

ಮುಂದಿನ ದಿನಗಳಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆಯಾಗುವಂತಹ ಸಂದೇಶಗಳನ್ನು ಪ್ರಸಾರ ಮಾಡುವುದು ಕಂಡುಬಂದಲ್ಲಿ, ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ..