ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮತ್ತೆ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು
ಬಂಟ್ವಾಳ: ಮೇ.27ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಮೇ.30ರಂದು ಮತ್ತೆ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.