ಕರಾವಳಿ

ಕೋಮು ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಕೋಮು ಪ್ರಚೋದನಕಾರಿ ಭಾಷಣಗಳ ವಿರುದ್ದ ಪೊಲೀಸರು ಸಮರ ಸಾರಿದ್ದು ಮಂಗಳೂರು ನಗರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕೊಲೆಯಾದ ಯುವಕನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ಥ್ಯ ಕದಡುವ ಮತ್ತು ಕೋಮು ವೈಷಮ್ಯಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕ‌ರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಭಾಕರ ಭಟ್ ಕಲ್ಲಡ್ಕ


ದಿನಾಂಕ 12.05.2025 ರಂದು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕ‌ರ್ ಭಟ್ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ. ಅಲ್ಲಿ ನೆರೆದಿದ್ದ ಸುಮಾರು 500 ಜನರನ್ನು ಉದ್ದೇಶಿಸಿ ಅವರು ಮಾತನಾಡುತ್ತಾ, ಸಮಾಜದಲ್ಲಿ ಅಶಾಂತಿ ಮೂಡಿಸುವ ಹಾಗೂ ವಿವಿಧ ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟುಮಾಡುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.


ಈ ಹೇಳಿಕೆಗಳಿಂದಾಗಿ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದನ್ನು ಗಂಭೀರವಾಗಿ ಪರಿಗಣಿಸಿ, ದಿನಾಂಕ 02.06.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 353(2) ಅಡಿಯಲ್ಲಿ ಪ್ರಕರಣ ಸಂಖ್ಯೆ (ಅಕ್ರ 2~) 60/2025 03 2 ದಾಖಲಿಸಲಾಗಿದೆ

Leave a Reply

Your email address will not be published. Required fields are marked *

error: Content is protected !!