ಕೋಮು ದ್ವೇಷ ಸಂದೇಶ ಪೋಸ್ಟ್: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಪುತ್ತೂರು: ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ಪ್ರಚೋದನಕಾರಿ ಹಾಗೂ ಕೋಮು ಭಾವನೆಗೆ ಧಕ್ಕೆ ತರುವ ಸಂದೇಶ ರವಾನಿಸಿ ಅಶಾಂತಿಗೆ ಕಾರಣ ಆಗುವವರ ವಿರುದ್ದ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನ “Maikala trolls” ಎಂಬ ಹೆಸರಿನ ಖಾತೆಯಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವಕನ ಕೊಲೆಗೆ ಸಂಬಂಧಿಸಿದಂತೆ ಕೋಮುದ್ವೇಶವನ್ನುಂಟು ಮಾಡುವಂತಹ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿರುತ್ತಾರೆ. ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಈ ಬಗ್ಗೆ ದಿನಾಂಕ: 02.06.2025 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 47/2025 ಕಲಂ: 353(2), 55 ಜೊತೆಗೆ 103 ಭಾರತೀಯ ನ್ಯಾಯ ಸಂಹಿತ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು