ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳನ್ನು ಬೆಳ್ತಂಗಡಿಗೆ ಕರೆತಂದು ಮಹಜರು
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಸೋಮವಾರ ಸಂಜೆ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್(21) ಮತ್ತು ಬಂಟ್ವಾಳ ತಾಲೂಕಿನ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ(27) ನನ್ನು ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಜೂ.2 ರಂದು ಬೆಳ್ತಂಗಡಿಯ ಗುರುವಾಯನಕೆರೆ ಅಂಗಡಿ, ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಅಂಗಡಿ, ಬೆಳ್ತಂಗಡಿ ಮೂರು ಮಾರ್ಗದ ಬಳಿ, ಉಜಿರೆಯ ನಿಡಿಗಲ್ ನದಿಯ ಬಳಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ದೀಪಕ್ ಮತ್ತು ಸುಮಿತ್ ಆಚಾರ್ಯ ರಹಿಮಾನ್ ಕೊಲೆ ಮಾಡಿದ ಬಳಿಕ ಬೈಕ್ ಮೂಲಕ ಬೆಳ್ತಂಗಡಿ ಕಡೆ ಪ್ರಯಾಣ ಮಾಡಿದ್ದಾರೆ. ಈ ವೇಳೆ ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಅಂಗಡಿಯೊಂದರಲ್ಲಿ ಹೊಸ ರೈನ್ ಕೋಟ್ ಖರೀದಿ ಮಾಡಿದ್ದರು ಎನ್ನಲಾಗುದ್ದು ಆ ಬಳಿಕ ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಶಾಪ್ ಗೆ ಹಾಗೂ ಹಾಗೂ ಕಲ್ಮಂಜ ಗ್ರಾಮದ ನಿಡಿಗಲ್ ಗೆ ಹೋಗಿದ್ದು ಬಳಿಕ ಚಿಕ್ಕಮಗಳೂರು ಕಡೆ ಪರಾರಿಯಾಗಿದ್ದರು ಎನ್ನಲಾಗಿದೆ.