ವಿಟ್ಲ: ಗುಂಪು ಕಟ್ಟಿಕೊಂಡು ಲಾರಿಗಳನ್ನು ತಡೆದ ಆರೋಪ, ಹಲವರ ವಿರುದ್ಧ ಪ್ರಕರಣ ದಾಖಲು
ವಿಟ್ಲ: ಗುಂಪು ಕಟ್ಟಿಕೊಂಡು ರಸ್ತೆಯಲ್ಲಿ ಸಂಚರಿಸುವ ಲಾರಿಗಳನ್ನು ತಡೆದು ನಿಲ್ಲಿಸಿದ ವಿಚಾರಕ್ಕೆ ಸಂಬಂಧಿಸಿ ಸುಮಾರು 30 ಮಂದಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 2ರಂದು ರಾತ್ರಿ ವೇಳೆ ಬಂಟ್ವಾಳ ತಾಲೂಕು ವೀರಕಂ ಭ ಗ್ರಾಮದ ಮಂಗಲಪದವು ಎಂಬಲ್ಲಿ ಕೆಲವು ಜನರುಉದ್ದೇಶಪೂರ್ವಕವಾಗಿ ಅಕ್ರಮ ಕೂಟ ಸೇರಿಕೊಂಡು ವಿಟ್ಲ-ಕಲ್ಲಡ್ಕರ ರಸ್ತೆಯಲ್ಲಿ ಹೋಗುವ ಲಾರಿಗಳನ್ನು ತಡೆದು ನಿಲ್ಲಿಸಿರುತ್ತಾರೆ ಎಂಬುದಾಗಿ ಮಾಹಿತಿ ಬಂದ ಮೇರೆಗೆ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು ಈ ವೇಳೆ ಸದ್ರಿ ರಸ್ತೆಯಲ್ಲಿ ಸಂಭವಿಸಿರುವ ಅಪಘಾತ ಪ್ರಕರಣವನ್ನು ನೆಪವಾಗಿಟ್ಟುಕೊಂಡುಆರೋಪಿಗಳಾದ ರಿಯಾಝ್, ಸಮದ್, ಕುಂಞಿಮೋನು, ರಹಿಮಾನ್, ಸುಲೈಮಾನ್ ಮತ್ತು ಇತರ ಸುಮಾರು 25 ಮಂದಿ ರಸ್ತೆಯಲ್ಲಿ ಘನ ವಾಹನಗಳು ಸಂಚರಿಸದಂತೆ ತಡೆಯೊಡ್ಡಿದ್ದಾರೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



