ಆರ್.ಸಿ.ಬಿ ಹೀರೋ ಕೊಹ್ಲಿಗೆ ಕನ್ನಡ ಬಾವುಟ ನೀಡಿದ ಡಿಕೆಶಿ
ಬೆಂಗಳೂರು: 18ನೇ ಐಪಿಎಲ್ ಆವೃತ್ತಿಯ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ಸಿಬಿ (RCB) ತಂಡ ಬುಧವಾರ ಬೆಂಗಳೂರಿಗೆ ಆಗಮಿಸಿದೆ. ಟ್ರೋಫಿ ಜಯಿಸಿದ ಆಟಗಾರರನ್ನು ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡರು.

ಆರ್‌ಸಿಬಿ ತಂಡದ ಆಟಗಾರರಿಗೆ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತ ಕೋರಿದರು. ಈ ವೇಳೆ, ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ಕನ್ನಡದ ಬಾವುಟ ನೀಡಿದರು. ಕನ್ನಡ ಧ್ವಜ ಹಾರಿಸುವ ಮೂಲಕ ವಿರಾಟ್ ಖುಷಿಪಟ್ಟರು. ಇಂದು ವಿಧಾನಸೌಧದ ಬಳಿ ಸಂಭ್ರಮಾಚರಣೆ ಸಮಾರಂಭ ಇರುವ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಸ್ವಾಗತಿಸಲು ಅಭಿಮಾನಿಗಳು ರಸ್ತೆಯುದ್ದಕ್ಕೂ ಕಿಕ್ಕಿರಿದು ಜಮಾಯಿಸಿದ್ದು ರಜತ್ ಪಾಟೀದಾರ್ ಪಡೆಗೆ ಅದ್ದೂರಿ ಶುಭ ಕೋರಲು ಫ್ಯಾನ್ಸ್ ಕಾತರರಾಗಿದ್ದಾರೆ.