ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಾವು-ನೋವಿಗೆ ರಾಜ್ಯ ಸರ್ಕಾರವೇ ಹೊಣೆ: ವಿಜಯೇಂದ್ರ ಆಕ್ರೋಶ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಆದ ಅಪಾರ ಸಾವು-ನೋವಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿ ಅಭಿಮಾನಿಗಳ ದುರಂತ ಸಾವಿನ ಕುರಿತು ಮಾತನಾಡಿದ ವಿಜಯೇಂದ್ರ, ಇದು ರಾಜ್ಯ ಸರ್ಕಾರದ ನಿರ್ಲಕ್ಷ್ಯ. ಯಾವುದೇ ತಯಾರಿ ಮಾಡಿಕೊಳ್ಳದೇ ಈ ಕಾರ್ಯಕ್ರಮ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಪ್ರಚಾರದ ಹುಚ್ಚಿಗೆ ಜನ ಬಲಿಯಾಗಿದ್ದಾರೆ. ಅಲ್ಲಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಕೊಂಡಿರಲಿಲ್ಲ. ನ್ಯಾಯಾಂಗ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.ಹನ್ನೊಂದಕ್ಕೂ ಹೆಚ್ಚು ಜನ ಸಾವು, ನೂರಾರು ಜನ ಚಿಕಿತ್ಸೆ ಪಡಿದ್ದಾರೆ. ಇದಕ್ಕೆ ಸರಕಾರ ನೇರ ಕಾರಣ ಎಂದು ಆರೋಪಿಸಿದ್ದಾರೆ.