ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಘಟನೆ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ – ಸಿಎಂ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ನಡೆದ ಕಾಲ್ತುಳಿತ, ನೂಕು ನುಗ್ಗಲು ಘಟನೆಗೆ ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ದುರಂತದಲ್ಲಿ 11 ಜನ ಮೃತಪಟ್ಟಿದ್ದಾರೆ. 47 ಜನ ಗಾಯಾಗಳಿಗೆ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದಿದ್ದಾರೆ.
ಇದೊಂದು ಅನಿರೀಕ್ಷಿತ ಬೆಳವಣಿಗೆ. 11 ಜನ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚವನ್ನೇ ಸರ್ಕಾರವೇ ಭರಿಸಲಿದೆ. ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.