ಕಡಬದಲ್ಲೂ ನಡೆಯಿತೇ ಹನಿಟ್ರ್ಯಾಪ್..? ಓರ್ವ ಪೊಲೀಸ್ ಬಲೆಗೆಓರ್ವ ಪೊಲೀಸ್ ಬಲೆಗೆ
ಕಡಬ: ಕಡಬದಲ್ಲಿ ಹನಿ ಟ್ರ್ಯಾಪ್ ನಡೆದಿದ್ದು ಮಂಗಳೂರು ಭಾಗದ ಯುವಕನೋರ್ವ ಕಡಬ ಸಮೀಪದ ಮರ್ದಾಳದ ಯುವಕರ ತಂಡದಿಂದ ಹನಿಟ್ರಾಪ್ ಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು ಈ ಸಂಬಂಧ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಕಡಬ ಪೋಲಿಸರು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಘಟನೆ ಅ.5ರಂದು ಲಭ್ಯವಾಗಿದೆ.

ಮಂಗಳೂರು ಸಮೀಪದ ಯುವಕನೋರ್ವ ಅ.4ರ ತಡರಾತ್ರಿ ಮರ್ದಾಳಕ್ಕೆ ಬಂದಿದ್ದು ಆ ಯುವಕನನ್ನು ಮರ್ದಾಳದ ಯುವಕರ ತಂಡವೊಂದು ನಿರ್ದಿಷ್ಟ ಜಾಗಕ್ಕೆ ಕೊಂಡೊಯ್ದು ಹಲ್ಲೆ ನಡೆಸಿ ಹಣ ನೀಡದಿದ್ದರೆ ಹುಡುಗಿಯ ವಿಚಾರದಲ್ಲಿ ನಿನ್ನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಒಡ್ಡಿ ಹಣ ತರುವಂತೆ ಹೇಳಿ ಬಿಟ್ಟಿದ್ದರು ಎನ್ನಲಾಗಿದೆ. ಅ.5 ರಂದು ಕಡಬದಲ್ಲಿದ್ದ ಮಂಗಳೂರಿನ ಯುವಕ ತನ್ನ ಸ್ನೇಹಿತರೋರ್ವರ ಮೂಲಕ ಕಡಬ ಪೋಲಿಸರನ್ನು ಭೇಟಿಯಾಗಿ ಮಾಹಿತಿ ನೀಡಿದ್ದ.
ಬಳಿಕ ಕಾರ್ಯಪ್ರವೃತ್ತರಾದ ಕಡಬ ಪೋಲಿಸರು ಸಂತ್ರಸ್ತನ ಮೂಲಕ, ಆರೋಪಿಗಳಿಗೆ ಹಣ ನೀಡುವುದಾಗಿ ಹೇಳಿ ಕಡಬಕ್ಕೆ ಬರಲು ತಿಳಿಸಿದ್ದರು. ಅದರಂತೆ ಮೂವರು ಆರೋಪಿಗಳು ಬಂದಿದ್ದರು. ಆರೋಪಿಗಳು ಎರಡು ಪ್ರತ್ಯೇಕ ವಾಹನದಲ್ಲಿ ಇದ್ದು, ಇಬ್ಬರು ದೂರದಿಂದಲೇ ಪೋಲಿಸರು ಬರುವ ಮಾಹಿತಿ ಅರಿತು ಪರಾರಿಯಾಗಿದ್ದಾರೆ. ಇನ್ನೋರ್ವ ಆರೋಪಿ ಕೂಡಾ ಪೋಲಿಸರನ್ನು ಕಂಡ ಕೂಡಲೇ ತಪ್ಪಿಸಿಕೊಂಡರೂ ಪೊಲೀಸ್ ರು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ತನಿಖೆಯಿಂದಷ್ಟೇ ಹೆಚ್ಚಿನ ಮಾಹಿತಿ ತಿಳಿಯಬಹುದಾಗಿದೆ.