ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ, ಮತ್ತೊರ್ವ ಆರೋಪಿ ಬಂಧನ
ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಈಗಾಗಲೇ 7 ಜನ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.

ಜೂ.ರಂದು ಶೃಂಗೇರಿ ಬೆಟ್ಟಗೆರೆ ಗ್ರಾಮದ ನಿವಾಸಿ ರವಿ ಸಂಜಯ್ (29) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.