ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ: ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸಹಿತ ಪೊಲೀಸ್ ಅಧಿಕಾರಿಗಳ ಅಮಾನತು
ಬೆಂಗಳೂರು: ಜೂನ್ 4ರಂದು ಬೆಂಗಳೂರಿನ ಎಂ,ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದು ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೂನ್ 5 ತುರ್ತು ಸುದ್ದಿಗೋಷ್ಠಿ ನಡೆಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ.ಶೇಖರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

ಘಟನೆಯಲ್ಲಿ ಮೂರು ಸಂಸ್ಥೆಗಳ ಬೇಜವಾಬ್ದಾರಿ ಕಂಡು ಬಂದಿದೆ. ಎಫ್ಐಆರ್ ದಾಖಲಿಸುವಂತೆ ಸೂಚಿಸಲಾಗಿದೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ , ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್‌ಪಾರ್ಕ್ ಇನ್ಸ್‌ಪೆಕ್ಟರ್ ಗಿರೀಶ್.ಎ.ಕೆ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು