ಬೆಳ್ತಂಗಡಿ: ಆಟೋ ರಿಕ್ಷಾ ಮೇಲೆ ಕಾಡಾನೆ ದಾಳಿ
ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ಬೊಳಿಯಾರ್ ಎಂಬಲ್ಲಿ ಕಾಡಾನೆಯೊಂದು ದಾಳಿ ಮಾಡಿದ ಹಿನ್ನಲೆಯಲ್ಲಿ ಆಟೋರಿಕ್ಷಾವೊಂದು ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.

ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ದೂರದಲ್ಲಿ ನಿಂತಿದ್ದರು ಎನ್ನಲಾಗಿದೆ.
ಈ ವೇಳೆ ಗುಂಪಿನಲ್ಲಿದ್ದ ದೊಡ್ಡ ಕಾಡಾನೆಯೊಂದು ರಿಕ್ಷಾದ ಮೇಲೆರಗಿ ರಿಕ್ಷಾವನ್ನು ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ದೂಡಿ ಹಾಕಿದೆ ಎಂದು ತಿಳಿದು ಬಂದಿದೆ.