ಆಟೋ ರಿಕ್ಷಾ ಮೇಲೆ ಕಾಡಾನೆ ದಾಳಿ; ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ; ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿ ಆಟೋ ರಿಕ್ಷಾವನ್ನು ಜಖಂ ಗೊಳಿಸಿದ ಘಟನೆ ನಡೆದ ಧರ್ಮಸ್ಥಳ ಗ್ರಾಮದ ಬೋಳಿಯಾರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಶನಿವಾರ ಭೇಟಿ ನೀಡಿದರು.

ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಆಟೋ ಚಾಲಕ ದಿನೇಶ್ ಮತ್ತು ಕುಟುಂಬಸ್ಥರನ್ನು ಭೇಟಿಯಾದ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು ಎಂದು ತಿಳಿದು ಬಂದಿದೆ.