ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ-ಮೋದಿ
ನವದೆಹಲಿ: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ. ಇದರಿಂದ ಎಲ್ಲರಿಗೂ ಅತೀವ ನೋವು ಉಂಟಾಗಿದೆ. ದುರಂತದಲ್ಲಿ ಸಿಲುಕಿರುವವರಿಗೆ ನೆರವು ನೀಡುವ ವಿಚಾರವಾಗಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಲ್ಲದೇ ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಮೋದಿ ತಿಳಿಸಿದ್ದಾರೆ.