“ಗುಡ್ ಬೈ ಇಂಡಿಯಾ” ಎಂದು ಭಾವುಕ ಪೋಸ್ಟ್ ಹಾಕಿ ವಿಮಾನವೇರಿದ್ದ ವ್ಯಕ್ತಿ ವಿಮಾನ ದುರಂತದಲ್ಲಿ ಸಾವು
ಅಹಮದಾಬಾದ್: ತಮ್ಮ ಗುಜರಾತ್ ಭೇಟಿ ಮುಗಿಸಿ, ಸ್ವದೇಶಕ್ಕೆ ಮರಳುವ ಮುನ್ನ ಭಾರತದಲ್ಲಿನ ತಮ್ಮ ಅನುಭವಗಳನ್ನು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದ ಲಂಡನ್ ಮೂಲದ ಜೇಮೀ ಮೀಕ್ ದುರಾದೃಷ್ಟವಶಾತ್ ಅವರಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಿಂದ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದ್ದು ಅವರು ಸಾವನ್ನಪ್ಪಿದ್ದಾರೆ.

ಭಾರತದಲ್ಲಿನ ತಮ್ಮ ಅದ್ಭುತ ಅನುಭವಗಳನ್ನು ತಮ್ಮ ಗೆಳೆಯರೊಂದಿಗೆ ಹಂಚಿಕೊಂಡಿದ್ದರು. ಅಲ್ಲದೇ ಬುಧವಾರ ರಾತ್ರಿ ಇಂದು ಭಾರತದಲ್ಲಿ ನನ್ನ ಕೊನೆ ರಾತ್ರಿ ಎಂದು ಬೇಸರದಲ್ಲಿ ಹೇಳಿಕೊಂಡಿದ್ದರು.
ಜೇಮೀ ಸ್ವದೇಶಕ್ಕೆ ಮರಳಲು ಅಹಮದಾಬಾದ್ ವಿಮಾನ ನಿಲ್ದಾಣದಿಂದ ವಿಮಾನ ಹತ್ತುವ ಕೆಲವೇ ನಿಮಿಷಗಳ ಮುನ್ನ ಮತ್ತೊಂದು ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ ಭಾರತಕ್ಕೆ ವಿದಾಯ goodby india ಎಂದು ಹೇಳಿಕೊಂಡಿದ್ದರು