ಅಂತಾರಾಷ್ಟ್ರೀಯರಾಷ್ಟ್ರೀಯ

ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ 1 ಕೋಟಿ ರೂ ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ನವದೆಹಲಿ: ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ  ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್  ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದೆ.

ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಗುರುವಾರ (ಜೂ.12) ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು. ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಓರ್ವ ಪವಾಡ ಸದೃಶ್ಯವಾಗಿ ಬದುಕುಳಿದ್ದು, ಉಳಿದ ಎಲ್ಲರೂ ಮೃತಪಟ್ಟಿದ್ದಾರೆ.


ಈ ದುರಂತಕ್ಕೆ ಟಾಟಾ ಗ್ರೂಪ್ನ ಅಧ್ಯಕ್ಷ ಎನ್ ಚಂದ್ರಶೇಖರನ್  ಸಂತಾಪ ಸೂಚಿಸಿದ್ದಾರೆ. “ಈ ದುರಂತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರೊಂದಿಗೆ ಇವೆ” ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!