ಅಹಮದಾಬಾದ್ ವಿಮಾನ ಅಪಘಾತದ ಸ್ಥಳಕ್ಕೆ ಅಮಿತ್ ಶಾ ಭೇಟಿ
ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ಜೂ.12ರಂದು ಮಧ್ಯಾಹ್ನ ಸಂಭವಿಸಿದ ವಿಮಾನ ಅಪಘಾತದಲ್ಲಿ 241 ಜನರು ಮೃತಪಪಟ್ಟಿದ್ದಾರೆ. ಕೇವಲ ಓರ್ವ ವ್ಯಕ್ತಿ ಬಚಾವಾಗಿದ್ದಾರೆ. ಈ ದುರಂತ ನಡೆದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಈ ಘಟನೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್ ಸಿಎಂ, ರಾಜ್ಯದ ಗೃಹ ಸಚಿವರು ಮತ್ತು ಡಿಜಿಪಿ ಅವರೊಂದಿಗೆ ಮಾತನಾಡಿದ್ದರು. ತಕ್ಷಣ ದೆಹಲಿಯಿಂದ ಅಹಮದಾಬಾದ್ಗೆ ಹೊರಟಿದ್ದ ಅಮಿತ್ ಶಾ ಬಳಿಕ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ನಾಗರಿಕ ವಿಮಾನಯಾನ ಸಚಿವ ಮುರಳೀಧರ್ ಮೊಹೋಲ್ ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಇದ್ದರು