ಇಸ್ರೇಲ್ ದಾಳಿಗೆ ಪ್ರತೀಕಾರವಾಗಿ ಇರಾನ್ ದಾಳಿ, ಯುದ್ಧ ಭೀತಿ
ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಇರಾನ್ ದಾಳಿ ನಡೆಸಿದೆ ಎಂದು ವರದಿಯಾಗಿದ್ದು ನೂರು ಮಿಸೈಲ್ ದಾಳಿಯನ್ನ ಇಸ್ರೇಲ್ ಮೇಲೆ ಇರಾನ್ ಮಾಡಿರುವ ಕುರಿತು ವರದಿಯಾಗಿದೆ. ಇಡೀ ಇಸ್ರೇಲ್ ನಲ್ಲಿ ಸೈರನ್ ಮೊಳಗುತ್ತಿದೆ ಎಂದು ಹೇಳಲಾಗುತ್ತಿದೆ.

ನಾಗರಿಕರನ್ನು ಶೆಲ್ಟರ್ ನಲ್ಲಿ ರಕ್ಷಣೆ ಪಡೆಯಲು ಹೇಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ಇಸ್ರೇಲಿನ ಬಹುಮಹಡಿ ಕಟ್ಟಡಗಳ ಮೇಲೆ ಇರಾನ್ ಮಿಸೈಲ್ ದಾಳಿ ನಡೆದಿರುವ ಕುರಿತು ವರದಿಯಾಗಿದೆ.
ಇಸ್ರೇಲ್ ಕ್ರೂರ ದಾಳಿಗೆ ನಿರ್ಣಾಯಕ ಪ್ರತಿಕ್ರಿಯೆಯು ಆಕ್ರಮಿತ ಪ್ರದೇಶಗಳಲ್ಲಿ ನೂರಾರು ಕ್ಷಿಪಣಿಗಳನ್ನು ಹಾರಿಸುವುದರೊಂದಿಗೆ ಪ್ರಾರಂಭವಾಯಿತು” ಎಂದು ಇರಾನ್ ಹೇಳಿಕೊಂಡಿರುವುದಾಗಿ ವರದಿಯಾಗಿದೆ. ಇಸ್ರೇಲ್ ಮತ್ತು ಇರಾನ್ ದಾಳಿಯ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದೆ.