ವಿಮಾನ ದುರಂತ: ಮೃತರ ಸಂಖ್ಯೆ ಏರಿಕೆ
ಗುಜರಾತ್ ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ, ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗಿದ್ದು ಒಟ್ಟು 274ಕ್ಕೆ ಏರಿಕೆಯಾಗಿದೆ.

ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಈ ಪೈಕಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಅಪಘಾತದಲ್ಲಿ ಬದುಕುಳಿದರು.