ಕರಾವಳಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರಿಗೆ N.I.A ಎಂಟ್ರಿ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.




ವಾರದ ಹಿಂದಷ್ಟೇ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿ ಆದೇಶ ಮಾಡಿತ್ತು.‌

ಬೆಂಗಳೂರು ಎ‌ನ್ಐಎ ಘಟಕದ ಅಧಿಕಾರಿಗಳು ಮಂಗಳೂರಿಗೆ ಬಂದಿದ್ದು ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮಂಗಳೂರು ಸಿಸಿಬಿ ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೇ.1ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಸುಹಾಸ್ ಶೆಟ್ಟಿಯ ಕೊಲೆ ನಡೆದಿತ್ತು. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!