ಕರಾವಳಿ

ಭಾರೀ ಮಳೆ: ಇಂದು ದ.ಕ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಜೂ.16 (ಸೋಮವಾರ) ‌ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಮೊದಲಿಗೆ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು ಇದೀಗ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆ ಆದೇಶ ಪರಿಷ್ಕರಿಸಿ ಜಿಲ್ಲೆಯಾದ್ಯತ ರಜೆ ಘೋಷಿಸಿ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!