ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ 3ನೇ ಸುತ್ತಿನ ಕೌನ್ಸೆಲಿಂಗ್
ಪುತ್ತೂರು: ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ವತಿಯಿಂದ ಸಂಸ್ಥೆಯಲ್ಲಿ ನೋಂದಾವಣೆ ಮಾಡಿರುವ ಉನ್ನತ ವಿದ್ಯಾಭ್ಯಾಸ ಬಯಸುವ ವಿದ್ಯಾರ್ಥಿಗಳಿಗೆ ಮೂರನೇ ಸುತ್ತಿನ ಕೌನ್ಸೆಲಿಂಗ್ ಜೂ.15ರಂದು ಪೋಳ್ಯ ಮದರಸ ಸಭಾಂಗಣದಲ್ಲಿ ನಡೆಯಿತು.

ಖ್ಯಾತ ತರಬೇತುದಾರರಾದ ರಫೀಕ್ ಮಾಸ್ಟರ್ ಹಾಗೂ ಡಾ.ವಾಜಿದ ಕೌನ್ಸೆಲಿಂಗ್ ನಡೆಸಿಕೊಟ್ಟರು. 44 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.