17 ಬಡ ವಿದ್ಯಾರ್ಥಿಗಳಿಗೆ ಶಾಸಕ ಅಶೋಕ್ ರೈ ಯವರಿಂದ ನೋಟ್ ಪುಸ್ತಕ ವಿತರಣೆ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕ ಸಂಕಷ್ಟದಲ್ಲಿರುವ ಒಟ್ಟು 17 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕವನ್ನು ಶಾಸಕ ಅಶೋಕ್ ರೈ ಅವರು ನೀಡಿದ್ದಾರೆ.

ತೀರಾ ಬಡತನದಲ್ಲಿರುವ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ನಿಟ್ಟಿನಲ್ಲಿ ಶಾಸಕರು ತನ್ನ ಸ್ವಂತನಿಧಿಯಿಂದ ಪುಸ್ತಕವನ್ನು ನೀಡಿದ್ದಾರೆ. ಈ ಸಂಧರ್ಭದಲ್ಲಿಮಾತನಾಡಿದ ಶಾಸಕರು ತನ್ನ ಕ್ಷೇತ್ರದಲ್ಲಿ ಅನೇಕ ಸಂಕಷ್ಟದಲದಲಿರುವ ಕುಟುಂಬಗಳು, ಅನಾರೋಗ್ಯದಿಂದ ಮನೆ ಯಜಮಾನ ಕೆಲಸಕ್ಕೂ ಹೋಗಲಾರದೆ ಕಷ್ಟದಲ್ಲಿರುವ ಕುಟುಂಬದ ಮಕ್ಕಳಿಗೆ ಬರೆಯುವ ಪುಸ್ತಕವನ್ನು ನೀಡಲಾಗಿದೆ. ಬಡವರ ಮಕ್ಕಳು ಆರ್ಥಿಕ ಸಂಕಷ್ಟದ ಕಾರಣಕ್ಕೆ ವಿದ್ಯೆಯಿಂದ ವಂಚಿತರಾಗಬಾರದು ಎಂಬುದೇ ನನ್ನಉದ್ದೇಶವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ ಉಪಸ್ಥಿತರಿದ್ದರು.