ಕರಾವಳಿ

ಬಸ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್; ಸವಾರ ಸ್ಥಳದಲ್ಲೇ ಸಾವು

ಕುಂದಾಪುರ: ಖಾಸಗಿ ಬಸ್‌ಗೆ ಬೈಕಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಕೆಂಚನೂರು ಸಮೀಪದ ಮಲ್ಲಾರಿಯ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಸಿಗಂದೂರು ನಿವಾಸಿ ಶರತ್(25) ಮೃತರು.



ಹೆಮ್ಮಾಡಿಯಿಂದ ಕೊಲ್ಲೂರು ಕಡೆಗೆ ಖಾಸಗಿ ಬಸ್ ಹೋಗುತ್ತಿದ್ದಾಗ ಬೈಕ್ ಬಸ್‌ಗೆ ಡಿಕ್ಕಿ ಹೊಡೆದಿದೆ. ಸವಾರ ಶರತ್ ರಸ್ತೆಗೆ ಬಿದ್ದು, ತಲೆ ಎಡ ಕಾಲಿಗೆ ಗಂಭೀರ ಗಾಯವಾಗಿದೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.



ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಡ್ಯೂಕ್ ಬೈಕ್‌ನ ರೇಡಿಯೇಟರ್ ಮೇಲೆ ಪೆಟ್ರೋಲ್ ಬಿದ್ದ ಕಾರಣ, ಬೆಂಕಿ ಹೊತ್ತಿಕೊಂಡು ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.  ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!