Uncategorized

ದುರ್ಗಾ ವಿಸರ್ಜನೆ ವೇಳೆ ದಿಢೀರ್ ಪ್ರವಾಹ| ನೀರಿನಲ್ಲಿ ಕೊಚ್ಚಿ ಹೋದ ಹಲವು ಮಂದಿ ಭಕ್ತರು‌



ದುರ್ಗಾ ವಿಸರ್ಜನೆ ವೇಳೆ ದಿಢೀರ್ ಸೃಷ್ಟಿಯಾದ ಪ್ರವಾಹದಿಂದ ಹಲವು ಭಕ್ತರು ಕೊಚ್ಚಿ ಹೋದ ಘಟನೆ ಪ.ಬಂಗಾಳದಲ್ಲಿ ನಡೆದಿದೆ. ಇಲ್ಲಿನ ಜಲ್‌ಪೈಗುರಿ ಜಿಲ್ಲೆಯ ನಿಯೋರಾ ನದಿ ದಂಡೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಈ ಅವಘಡ ಸಂಭವಿಸಿದ್ದು ಹಲವರು ನಾಪತ್ತೆಯಾಗಿದ್ದಾರೆ.

ಕಳೆದೆರಡು ದಿನದಿಂದ ಸತತ ಮಳೆಯಾಗುತ್ತಿದ್ದ ಕಾರಣ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ ಸೃಷ್ಟಿಯಾಗಿದೆ. ಇದರಿಂದ ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಭಕ್ತರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. 7 ಮಂದಿ ಮೃತದೇಹ ಹೊರಕ್ಕೆ ತೆಗೆಯಲಾಗಿದ್ದು 60ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.
ರಕ್ಷಿಸಿದ ಭಕ್ತರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಅತೀ ದೊಡ್ಡ ಹಬ್ಬವಾಗಿದೆ. ದುರ್ಗಾ ಮೂರ್ತಿ ಆರಾಧಿಸಿ ವಿಸರ್ಜನೆ ಮಾಡುವುದು ಸಂಪ್ರದಾಯ. ಹೀಗೆ ಮಾಲ್‌ಬಜಾರ್‌ನಲ್ಲಿನ ದುರ್ಗಾ ಪೂಜೆಗೆ ಇಡೀ ಗ್ರಾಮವೇ ಸೇರಿತ್ತು. ದುರ್ಗಾ ಮೂರ್ತಿ ವಿಸರ್ಜನೆ ಮಾಡುವ ವೇಳೆ ಹಲವು ಭಕ್ತರು ನದಿ ದಂಡೆಯಲ್ಲಿ ನಿಂತಿದ್ದರು. ಈ ವೇಳೆ ದಿಢೀರ್ ಪ್ರವಾಹ ಸೃಷ್ಟಿಯಾಗಿದೆ. ಇದರಿಂದ ಮಕ್ಕಳು, ಮಹಿಳೆಯರು, ವೃದ್ಧರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!