ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.


ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು.

Leave a Reply

Your email address will not be published. Required fields are marked *

error: Content is protected !!