ಅಂತಾರಾಷ್ಟ್ರೀಯಕ್ರೀಡೆ

ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಮೃತಿ ಮಂಧಾನ

ಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಐಸಿಸಿ ಏಕದಿನ ಬ್ಯಾಟರ್ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಸ್ಮೃತಿ ಈ ಬಾರಿ 727 ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ. ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ ಟಾಪ್-10 ನಲ್ಲಿ ಕಾಣಿಸಿಕೊಂಡಿಲ್ಲ.



ಅಷ್ಟೇ ಅಲ್ಲದೆ ಐಸಿಸಿ ಏಕದಿನ ಬ್ಯಾಟರ್ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಸ್ಮೃತಿ ಮೊದಲ ಸ್ಥಾನಕ್ಕೇರುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ 2019 ರಲ್ಲಿ ಅವರು ಅಗ್ರಸ್ಥಾನ ಅಲಂಕರಿಸಿದ್ದರು. ಆದರೆ ಈ ಬಾರಿ ನಡೆದ ಸೌತ್ ಆಫ್ರಿಕಾ, ಶ್ರೀಲಂಕಾ ನಡುವಣ ತ್ರಿಕೋನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸ್ಮೃತಿ ಮಂಧಾನ 6 ವರ್ಷಗಳ ಬಳಿಕ ಐಸಿಸಿ ಏಕದಿನ ಬ್ಯಾಟರ್ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಮೃತಿ ಮಂಧಾನ ಅವರ ನಂತರದ ಸ್ಥಾನದಲ್ಲಿ ಇಂಗ್ಲೆಂಡ್ನ ನಟಾಲಿ ಸ್ಕಿವರ್-ಬ್ರಂಟ್ ಕಾಣಿಸಿಕೊಂಡಿದ್ದಾರೆ. ಮೂರನೇ ಸ್ಥಾನವನ್ನು ಸೌತ್ ಆಫ್ರಿಕಾದ ಲಾರಾ ವೋಲ್ವಾರ್ಡ್ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!