ಪುತ್ತೂರು: ಕೌಡಿಚ್ಚಾರ್ ಬಳಿ ವಾಹನಗಳ ಸರಣಿ ಅಪಘಾತ ಅ.6ರಂದು ನಡೆದಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿದೆ.
ಅಪಫಾತಗೊಂಡ ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬ್ರೇಕ್ ಹಾಕಿದ ಇನ್ನೋವಾ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.