ಕರಾವಳಿಕ್ರೈಂ

ಬೆಳ್ತಂಗಡಿ: ಸಹಾಯ ಮಾಡುವ ನೆಪದಲ್ಲಿ ಲಕ್ಷಾಂತರ ರೂ ವಂಚಿಸಿದ ಮಹಿಳೆ! ಪ್ರಕರಣ ದಾಖಲು

ಬೆಳ್ತಂಗಡಿ: ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ಪ್ರಕರಣವೊಂದನ್ನು ಬಗೆಹರಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವರ ವಿರುದ್ದ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Oplus_0

ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ನಿವಾಸಿ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ‌ ಅನ್ವಯ ಇದೀಗ ಪ್ರಕರಣ ದಾಖಲಾಗಿದೆ. ರಾಜೇಶ್ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಗೆಹರಿಸುವುದಾಗಿ ಹೇಳಿ ಹಣ ಪಡೆದಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ದೂರುದಾರ ರಾಜೇಶ್ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್ಬುಕ್ ಮೂಲಕ ಪರಿಚಯವಾಗಿದ್ದಾಳೆ. ತಾನು ಹೆಲ್ಪ್ಲೈನ್ ಮೂಲಕ ವಂಚನೆಗೊಳಗಾದವರಿಗೆ ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಬಗೆಹರಿಸಿದ್ದೇನೆ ಅಂತ ರಾಜೇಶ್ ಅವರಿಗೆ ನಂಬಿಸಿದ್ದಾಳೆ.

ಆಗ, ರಾಜೇಶ್ ಅವರು, ತಮ್ಮ ಮೇಲೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಕೇಸ್ ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್ ಅವರಿಂದ ಸಂಧ್ಯಾ ಹಂತ ಹಂತವಾಗಿ 3.20 ಲಕ್ಷ ರೂ. ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್ ಅವರು ಸಂಧ್ಯಾಗೆ ಪ್ರಶ್ನಿಸಿದ್ದಾರೆ.

ಆಗ, ಇನ್ನೂ ಹೆಚ್ಚಿನ ಹಣ ನೀಡುವಂತೆ ಸಂಧ್ಯಾ ಹೇಳಿದ್ದಾಳೆ. ಸಂಧ್ಯಾ ಮಾತು ಕೇಳಿ ಸಂಶಯಗೊಂಡ ರಾಜೇಶ್ ಅವರು ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಎನ್ಎಸ್ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!