ಕ್ರೈಂ

ಥಾಯ್ಲೆಂಡ್‌ನ ಮಕ್ಕಳ ಆರೈಕೆ ಕೇಂದ್ರದಲ್ಲಿ ಗುಂಡಿನ ದಾಳಿ, 30ಕ್ಕೂ ಅಧಿಕ ಮಂದಿ ಸಾವುಬ್ಯಾಂಕಾಕ್: ಥಾಯ್ಲೆಂಡ್‌ನ ಮಕ್ಕಳ ಆರೈಕೆ ಕೇಂದ್ರದಲ್ಲಿ ಗುಂಡಿನ ದಾಳಿ ನಡೆದಿದ್ದು, 30 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. 

ನೊಂಗ್ಬುವಾ ಲಂಫೂ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಮಧ್ಯಾಹ್ನ ಆರೈಕೆ ಕೇಂದ್ರಕ್ಕೆ ನುಗ್ಗಿದ ಬಂದೂಕುಧಾರಿ ವ್ಯಕ್ತಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ್ದಾನೆ ಎಂದು ಪೊಲಿಸ್ ಮೇಜರ್ ಜನರಲ್ ತಿಳಿಸಿದ್ದಾರೆ.

30 ಮಂದಿ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದು, ಹೆಚ್ಚಿನ ಮಾಹಿತಿ ನೀಡಿಲ್ಲ. ದಾಳಿ ಬಳಿಕ ಬಂದೂಕುಧಾರಿ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

23 ಮಕ್ಕಳು, ಇಬ್ಬರು ಶಿಕ್ಷಕರು ಮತ್ತು ಒಬ್ಬ ಪೊಲೀಸ್ ಮೃತಪಟ್ಟಿರುವುದು ಈವರೆಗೆ ದೃಢಪಟ್ಟಿದೆ ಎಂದು ಪ್ರಾದೇಶಿಕ ಸಾರ್ವಜನಿಕ ವ್ಯವಹಾರಗಳ ಕಚೇರಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!