ಕತಾರ್| ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್
ಕತಾರ್‌ನ ಅಲ್ ಉದೈದ್ ವಾಯುನೆಲೆಯಲ್ಲಿ ಅಮೆರಿಕದ ಪಡೆಗಳ ಮೇಲೆ ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ. ಕತಾರ್ ರಾಜಧಾನಿ ದೋಹಾದಲ್ಲಿ ಭಾರೀ ಸ್ಫೋಟಗಳು, ಜ್ವಾಲೆಗಳು ಕಂಡುಬಂದಿವೆ ಎಂದು ವರದಿಯಾಗಿದೆ.

ಕತಾರ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಇರಾನ್ ಆರು ಕ್ಷಿಪಣಿಗಳನ್ನು ಹಾರಿಸಿದೆ. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಕತಾರ್ ವಾಯು ಸಂಚಾರವನ್ನು ಸ್ಥಗಿತಗೊಳಿಸಿದೆ.
ಅಮೆರಿಕದ ದಾಳಿಗೆ ಪ್ರತೀಕಾರವಾಗಿ ಇರಾನ್ ಕತಾರ್‌ನಲ್ಲಿರುವ ನೆಲೆಗಳ ಮೇಲೆ 6 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಅಮೆರಿಕದ ಮಾಧ್ಯಮಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
ಕತಾರ್ ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಅತಿದೊಡ್ಡ ನೆಲೆಯಾದ ಅಲ್ ಉದೈದ್ ವಾಯುನೆಲೆಯನ್ನು ಹೊಂದಿದೆ, ಇದು ಅಮೆರಿಕದ ಕೇಂದ್ರ ಕಮಾಂಡ್‌ನ ಮುಂಚೂಣಿ ಪ್ರಧಾನ ಕಚೇರಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಸುಮಾರು 10,000 ಸೈನಿಕರು ಈ ಸೇನಾ ನೆಲೆಯಲ್ಲಿ ಇದ್ದಾರೆ ಎನ್ನಲಾಗುತ್ತಿದೆ.