ಟ್ರಂಪ್ “ಕದನ ವಿರಾಮ” ಘೋಷಣೆ ಲೆಕ್ಕಿಸದ ಇರಾನ್’ನಿಂದ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ: ವರದಿ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಹೇಳಿಕೆಯ ಬೆನ್ನಲ್ಲೇ ಇರಾನ್, ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಟೆಲ್ ಅವೀವ್ ಹೊರತುಪಡಿಸಿ, ಬೀರ್ ಶೀವಾ ಮೇಲೆ ಇರಾನ್ ಕ್ಷಿಪಣಿಗಳ ದಾಳಿ ಮಾಡಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ.
ಇಸ್ರೇಲ್ ಮೇಲೆ ಸೀಮಿತ ಸಂಖ್ಯೆಯ ಕ್ಷಿಪಣಿಗಳೊಂದಿಗೆ ಇರಾನ್ ದಾಳಿ ನಡೆಸಿದ್ದು, ಇಸ್ರೇಲ್ ಪ್ರಸ್ತುತ ಇರಾನಿನ ಕ್ಷಿಪಣಿಗಳನ್ನು ತಡೆಹಿಡಿಯುತ್ತಿದೆ. ಟೆಲ್ ಅವೀವ್ನಲ್ಲಿಯೂ ಸ್ಫೋಟಗಳ ಶಬ್ದ ಕೇಳಿಬರುತ್ತಿದೆ ಎಂದು ವರದಿಯಾಗಿದೆ.