ಇಂದಿನಿಂದ ಅ.8ರ ವರೆಗೆ ಭಾರೀ ಮಳೆ ಸಾಧ್ಯತೆ:
ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಬೆಂಗಳೂರು: ಇಂದಿನಿಂದ ಅ.8ರ ವರೇಗೆ ಭಾರೀ ಮಳೆ
ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಪುತ್ತೂರು: ಕರ್ನಾಟಕದ ರಾಜಧಾನಿ ಬೆಂಗಳೂರು (Bengaluru Rains) ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಅ. 8ರವರೆಗೆ ಭಾರೀ ಮಳೆಯಾಗಲಿದೆ. ಆದರೆ, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲೂ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ.
ಇಂದಿನಿಂದ ಅಕ್ಟೋಬರ್ 8ರವರೆಗೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅತಿ ಮಳೆ ಬೀಳುವ ಪ್ರದೇಶಗಳಲ್ಲಿರುವ ಜನರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ಮುಂದಿನ ಮೂರು ದಿನ ಒಡಿಶಾ, ಆಂಧ್ರಪ್ರದೇಶದ ಕರಾವಳಿಯಲ್ಲಿ ವರುಣ ಅಬ್ಬರಿಸಲಿದ್ದಾನೆ. ಇದರ ಜೊತೆ ಛತ್ತೀಸ್ಗಢ ಮತ್ತು ಮಧ್ಯ ಪ್ರದೇಶದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ವಿದರ್ಭ ಮತ್ತು ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಅಸ್ಸಾಂ, ಮೇಘಾಲಯ, ಬಿಹಾರ, ಹರಿಯಾಣ, ಚಂಡೀಗಢ, ದೆಹಲಿ, ಹಿಮಾಚಲ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಮರಾಠವಾಡ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ನಿರೀಕ್ಷೆಯಿದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗುಜರಾತ್, ಕೊಂಕಣ, ಗೋವಾ ಮತ್ತು ರಾಯಲಸೀಮಾದಲ್ಲಿ ಕೂಡ ಹೆಚ್ಚು ಮಳೆ ಹಾಗೂ ಮಿಂಚಿನ ಸಾಧ್ಯತೆಯಿದೆ. ಲಡಾಖ್ನಲ್ಲಿ ಹಿಮ ಬೀಳುವ ಸಾಧ್ಯತೆ ಇದೆ. ಉತ್ತರ ಹಿಮಾಲಯ ಪ್ರದೇಶದಲ್ಲಿ ಮುಂಜಾನೆ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ.