ರಾಷ್ಟ್ರೀಯ

ರೀಲ್ಸ್ ಹುಚ್ಚಾಟ: ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ಯುವತಿ!

ಯುವತಿಯೊಬ್ಬಳು ರೀಲ್ಸ್ ಗಾಗಿ ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದಿದ್ದಾಳೆ. ಯುವತಿ ಮಾಡಿದ ಎಡವಟ್ಟಿನಿಂದಾಗಿ ರೈಲು 45 ನಿಮಿಷಿಗಳ ಕಾಲ ವಿಳಂಬವಾಗಿದೆ ಎಂದು ವರದಿಯಾಗಿದೆ.


ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ನಾಗುಲಪಲ್ಲಿ-ಶಂಕರಪಲ್ಲಿ ಮಾರ್ಗದಲ್ಲಿ ನಡೆದಿದೆ. ಯುವತಿಯೊಬ್ಬಳು ಹಳಿಗಳ ಮೇಲೆ ಕಾರು ಚಲಾಯಿಸುವುದನ್ನು ರೈಲ್ವೆ ಸಿಬ್ಬಂದಿ ಗಮನಿಸಿದಾಗ ತಡೆಯಲು ಪ್ರಯತ್ನಿಸಿದರು. ಆದರೆ, ಕಾರು ನಿಲ್ಲಿಸದೆ ಯುವತಿ ಅಲ್ಲಿಂದ ಹೊರಟುಹೋದಳು.
ಇನ್ನು ಅದೇ ಮಾರ್ಗದಲ್ಲಿ ಬರುತ್ತಿದ್ದ ರೈಲಿನ ಲೋಕೋ ಪೈಲಟ್ ಕಾರನ್ನು ಗಮನಿಸಿ ರೈಲನ್ನು ನಿಲ್ಲಿಸಿದರು. ನಂತರ, ಸ್ಥಳೀಯರು ಯುವತಿಯನ್ನು ಬಹಳ ಕಷ್ಟಪಟ್ಟು ಕಾರಿನಿಂದ ಹೊರಗೆಳೆದರು. ಈ ವೇಳೆ ಸ್ಥಳದಲ್ಲಿ ಕೆಲ ಕಾಲ ಮಾತಿನ ಚಕಮಕಿ ನಡೆಯಿತು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಯುವತಿಯನ್ನು ವಶಕ್ಕೆ ಪಡೆದರು. ಯುವತಿಯ ದುರ್ವರ್ತನೆಯಿಂದಾಗಿ ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!