ಕಾಂಗ್ರೆಸ್ ನಾಯಕರ ವಿರುದ್ಧ ಪತ್ರಿಕೆಗಳಿಗೆ ಜಾಹೀರಾತು ನೀಡಿರುವ ಬಿಜೆಪಿಯ ಕ್ರಮವನ್ನು ಖಂಡಿಸಿದ ಕಾಂಗ್ರೆಸ್
ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಪತ್ರಿಕೆಗಳಿಗೆ ಜಾಹೀರಾತು ನೀಡಿರುವ ಬಿಜೆಪಿಯ ಕ್ರಮವನ್ನು ಕಾಂಗ್ರೆಸ್ ಖಂಡಿಸಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಕೆಪಿಸಿಸಿ, ‘ತನ್ನ ಹತಾಶೆ, ಸೋಲು, ನೋವುಗಳನ್ನು ಜಾಹೀರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ ಬಿಜೆಪಿ’ ಎಂದು ಟೀಕಿಸಿದೆ.
‘ಒಂದೇ ವಾರದಲ್ಲಿ ಎರಡೆರೆಡು ಭಾರಿ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡುತ್ತಿರುವ ಬಿಜೆಪಿಯ ಹತಾಶೆ ಹಿಮಾಲಯದೆತ್ತರಕ್ಕೆ ಏರಿದೆ. ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ಬಾಕಿ’ ಎಂದು ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಸಿ ಬಿಜೆಪಿ ಜಾಹೀರಾತು ನೀಡಿದೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಗೆ ಉತ್ತಮ ಜನಸ್ಪಂದನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಿಜೆಪಿ ಪತ್ರಿಕೆಗಳಿಗೆ ಜಾಹೀರಾತು ನೀಡಿದೆ ಎಂದು ಆರೋಪಿಸಲಾಗಿದೆ.