ಪುತ್ತೂರು|ಜೈನ ಧರ್ಮದ ಸ್ವಾಮೀಜಿ, ಪ್ರಧಾನಿ ಗೌರವಕ್ಕೆ ಧಕ್ಕೆಯಾಗುವ ಪೋಸ್ಟ್-ಪ್ರಕರಣ ದಾಖಲು
ಪುತ್ತೂರು: ಜೈನ ಧರ್ಮದ ಸ್ವಾಮೀಜಿಗೆ ಮತ್ತು ಭಾರತದ ಪ್ರಧಾನಿಯವರ ಗೌರವಕ್ಕೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರಸಭೆ ಸದಸ್ಯ ಕೆ.ಜೀವಂಧರ್ ಜೈನ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣವಾದ ಪೇಸ್ ಬುಕ್‌ನಲ್ಲಿ ‘ಕರುನಾಡಿನ ಮಿನುಗುವ ನಕ್ಷತ್ರ’ ಎಂಬ ಪೇಸ್‌ಬುಕ್ ಪೇಜ್ ಹೊಂದಿರುವ ವ್ಯಕ್ತಿಯು ಪೇಸ್ ಬುಕ್‌ನಲ್ಲಿನ ಪೋಸ್ಟ್ ವೊಂದಕ್ಕೆ ಕಮೆಂಟ್. ಮಾಡುವ ವೇಳೆ ಜೈನ ಧರ್ಮದ ಸ್ವಾಮೀಜಿಗೆ ಮತ್ತು ಭಾರತದ ಪ್ರಧಾನ ಮಂತ್ರಿಗಳ ಗೌರವಕ್ಕೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಹಾಗೂ ಸಾರ್ವಜನಿಕ ಶಾಂತಿ ನೆಮ್ಮದಿಗೆ ದಕ್ಕೆಯುಂಟು ಮಾಡುವ ರೀತಿಯಲ್ಲಿ ಕಮೆಂಟ್ ಮಾಡಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರು ಸ್ವೀಕರಿಸಿದ ಪೊಲೀಸರು ಸೆಕ್ಷನ್ 196(1)(ಎ),353(2) ಬಿಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.