ಆಟೋ ರಿಕ್ಷಾ, ಬೈಕ್ ಡಿಕ್ಕಿ-ಮಗು ಸಹಿತ 7 ಮಂದಿಗೆ ಗಾಯ
ಪುತ್ತೂರು: ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ರಿಕ್ಷಾ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜೂ. 29ರಂದು ನಡೆದಿದೆ. ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮಗು ಸಹಿತ 7 ಮಂದಿ ಗಾಯಗೊಂಡಿದ್ದಾರೆ. ಬೈಕ್ ಸವಾರನಿಗೂ ಗಾಯವಾಗಿದೆ.

ಅಪಘಾತದಿಂದಾಗಿ ರಿಕ್ಷಾ ಪಲ್ಟಿಯಾಗಿದೆ. ರಿಕ್ಷಾದಲ್ಲಿದ್ದ ಸಾಲೆತ್ತೂರು ಮೂಲದ ತಮೀಮ್ (5ವ), ಹಮೀದ್ (40ವ), ಇಸ್ಮಾಯಿಲ್ (45ವ), ಇಬ್ರಾಹಿಂ (65ವ), ಸಮೀರ್ (34ವ), ಸುಲೈಮಾನ್ (26ವ) ಹಾಗೂ ಬೈಕ್ ಸವಾರ ಗಾಯಗೊಂಡಿದ್ದಾರೆ. ರಿಕ್ಷಾದಲ್ಲಿದ್ದವರು ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎನ್ನಲಾಗಿದೆ. ರಿಕ್ಷಾದಲ್ಲಿದ್ದ ಗಾಯಾಳುಗಳು ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೈಕ್ ಸವಾರ ಚೇತನಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.



