ರಾಜ್ಯ

ಹಾಸನ: ಮುಂದುವರಿದ ಹೃದಯಘಾತದ ಸಾವು

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ (Heart Attack) ಸರಣಿ ಮುಂದುವರಿದಿದ್ದು, ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಸಾಂದರ್ಭಿಕ ಚಿತ್ರ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಲೋಹಿತ್ ಹೃದಯಾಘಾತದಿಂದ ಅಸುನೀಗಿದ್ದಾರೆ. ಬೇಲೂರಿನ ಲೇಪಾಕ್ಷಿ, ಹೊಳೆನರಸೀಪುರದ ಮುತ್ತಯ್ಯ (58), ನುಗ್ಗೆಹಳ್ಳಿಯ ಕುಮಾರ್ (53) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ದಿನೇ ದಿನೇ ಹೃದಯಘಾತ ಸಂಬಂಧಿಸಿದ ಸಾವುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಜನರು ಆತಂಕಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!