ಕರಾವಳಿಕ್ರೈಂ

ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಸೆರೆ



ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಅಬ್ದುಲ್ ರಹ್ಮಾನ್



ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33ವ) ಎಂಬಾತನನ್ನು ಬಂಟ್ವಾಳ ರಾಯಿ ಎಂಬಲ್ಲಿ ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡಿದೆ.

ಇದರೊಂದಿಗೆ ಈ ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 27ರಂದು ಅಬ್ದುಲ್ ರಹ್ಮಾನ್ ಅವರ ಹತ್ಯೆಯಾಗಿತ್ತು.

Leave a Reply

Your email address will not be published. Required fields are marked *

error: Content is protected !!