ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ
ಬಂಟ್ವಾಳ: ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜೂ.30ರಂದು ಧರ್ಮಸ್ಥಳದಲ್ಲಿ ಬಂಧಿಸಿ ನ್ಯಾಯಯಕ್ಕೆ ಹಾಜರುಪಡಿಸಿರುವ ಘಟನೆ ನಡೆದಿದೆ.

2011ರಲ್ಲಿ ಸಾಲಿನಲ್ಲಿ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ : ಬಿ ಮೂಡ ಗ್ರಾಮದ ವಾರೆಂಟ್ ಆರೋಪಿ ಅಕ್ಬರ್ ಸಿದ್ದಿಕ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.