ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಕಣ್ಣೂರಿನ ಏರ್ಪೋರ್ಟ್‌ನಲ್ಲಿ ಬಂಧಿಸಿದ ಎನ್.ಐ.ಎ
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ನನ್ನು ಎನ್‌ಐಎ ಅಧಿಕಾರಿಗಳು ಕೇರಳದ ಕಣ್ಣೂರಿನ ಏರ್ಪೋರ್ಟ್‌ನಲ್ಲಿ ಬಂಧಿಸಿದ್ದಾರೆ.

ರಹಿಮಾನ್ ಕತಾರ್‌ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಾಗಲೇ ಎನ್‌ಐಎ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳನ್ನು ಎನ್‌ಐಎ ಬಂಧನ ಮಾಡುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಅಬ್ದುಲ್ ರಹಿಮಾನ್, ವಿದೇಶಕ್ಕೆ ಹಾರಿದ್ದ.
ಈ ಕುರಿತು ಎನ್‌ಐಎ ಲುಕೌಟ್ ನೋಟಿಸ್ ಜಾರಿ ಮಾಡಲಾಗಿತ್ತು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಒಟ್ಟು 28 ಮಂದಿಯ ವಿರುದ್ಧ ಚಾರ್ಜ್‌ಶೀಟ್ ಹಾಕಲಾಗಿದೆ ಎಂದು ಎನ್‌ಐಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಜುಲೈ 26,2022 ರಂದು ಪ್ರವೀನ್ ನೆಟ್ಟಾರು ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕೊಲೆ ಮಾಡಲಾಗಿತ್ತು.