ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಪ್ರಕರಣ: ಆರೋಪಿ ಪೊಲೀಸರ ವಶಕ್ಕೆ
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿದಿದ್ದಾರೆ