ಪುತ್ತೂರು| ಯುವತಿಗೆ ವಂಚಿಸಿದ ಪ್ರಕರಣ: ಆರೋಪಿ ಶ್ರೀಕೃಷ್ಣ ಗೆ ನ್ಯಾಯಾಂಗ ಬಂಧನ

ಪುತ್ತೂರು: ಮದುವೆಯಾಗುವುದಾಗಿ ಯುವತಿಗೆ ನಂಬಿಸಿ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿ ಶ್ರೀಕೃಷ್ಣ ಜೆ ಅವರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ತಂದೆ ಪಿ.ಜಿ ಜಗನ್ನಿವಾಸ್ ರಾವ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಇಬ್ಬರನ್ನು ಕೂಡ ಜು.5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.