ರಾಜ್ಯ

ಶರಣ್ ಪಂಪ್‌ವೆಲ್‌ಗೆ ಒಂದು ತಿಂಗಳು ಚಿಕ್ಕಮಗಳೂರು ಪ್ರವೇಶ ನಿರ್ಬಂಧ 

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ಒಂದು ತಿಂಗಳ ಕಾಲ ನಿರ್ಬಂಧ ಹೇರಿದೆ. ದಿನಾಂಕ 06-07-2025 ರಿಂದ 04-08-2025 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.


ಶರಣ್ ಪಂಪ್‌ವೆಲ್‌ ಮೇಲೆ 22ಕ್ಕೂ ಹೆಚ್ಚು ಕಾನೂನು ಪ್ರಕರಣಗಳು ದಾಖಲಾಗಿದ್ದು, ಚಿಕ್ಕಮಗಳೂರು, ಮೂಡಿಗೆರೆ, ಮತ್ತು ಆಲ್ದೂರಿನಲ್ಲಿ ಸಭೆ-ಸಮಾರಂಭಗಳನ್ನು ಆಯೋಜಿಸಿದ್ದಾರೆ. ಶರಣ್ ಪಂಪ್‌ವೆಲ್ ಭಾಷಣದಿಂದ ಗಲಾಟೆ ಹಾಗೂ ಗುಂಪು ಘರ್ಷಣೆಗಳಿಗೆ ಕಾರಣವಾಗಬಹುದು ಎಂದು ಆರೋಪಿಸಲಾಗಿದೆ.

ಚಿಕ್ಕಮಗಳೂರು ಸೇರಿದಂತೆ ಕೆಲವು ಪಟ್ಟಣಗಳು ಮತೀಯ ಸೂಕ್ಷ್ಮ ಪ್ರದೇಶಗಳಾಗಿದ್ದು, ಸಣ್ಣ ಘಟನೆಗಳೂ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಈ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!