ಕರಾವಳಿರಾಜಕೀಯ

ಪುತ್ತೂರು: ಪಿ ಜಿ ಜಗನ್ನಿವಾಸ ರಾವ್ ಅವರಿಗೆ ನೋಟೀಸ್ ಜಾರಿ ಮಾಡಿದ ಬಿಜೆಪಿ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಅವರ ತಂದೆ ಬಿಜೆಪಿ ನಗರ ಮಂಡಲದ ಮಾಜಿ ಅಧ್ಯಕ್ಷ ಹಾಗೂ ಪ್ರಸ್ತುತ ಪುತ್ತೂರು ನಗರಸಭಾ ಸದಸ್ಯರೂ ಆಗಿರುವ ಪಿ ಜಿ ಜಗನ್ನಿವಾಸ ರಾವ್ ಅವರಿಗೆ ಪುತ್ತೂರು ಬಿಜೆಪಿಯಿಂದ ಪಕ್ಷಕ್ಕೆ ಸಾರ್ವಜನಿಕವಾಗಿ ಮುಜುಗರ ಉಂಟುಮಾಡಿದ್ದಕ್ಕಾಗಿ ಕಾರಣ ಕೇಳಿ ನೋಟಿಸ್ ಜಾರಿಯಾಗಿದೆ ಎಂದು ತಿಳಿದು ಬಂದಿದೆ.

‘ಶ್ರೀಕೃಷ್ಣ, ಯುವತಿಯನ್ನುನಂಬಿಸಿ ವಂಚಿಸಿದ ಬಗ್ಗೆ ಮಾದ್ಯಮಗಳಲ್ಲಿ ಹಾಗೂ ಸಾರ್ವಜನಿಕವಾಗಿ ಆಗುತ್ತಿರುವ ಪ್ರಚಾರದಿಂದ ಪಕ್ಷಕ್ಕೆ ಮುಜುಗರ ಉಂಟಾಗಿದ್ದು ಈ ಘಟನೆ ಬಗ್ಗೆ ಈಗಾಗಲೇ ಸಂತ್ರಸ್ಥೆಯ ಕುಟುಂಬದವರು ನೀವು ನ್ಯಾಯ ಸಮ್ಮತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಪಿ ಜಿ ಜಗನ್ನಿವಾಸ ರಾವ್ ಪಕ್ಷದಲ್ಲಿ ಜವಾಬ್ದಾರಿಯುತವಾಗಿ ನ್ಯಾಯಯುತವಾಗಿ ನಡೆದುಕೊಳ್ಳಬೇಕಾಗಿದ್ದು, ಸಂತ್ರಸ್ಥ ಯುವತಿಗೆ ನ್ಯಾಯ ಒದಗಿಸಿ ಕೊಡಬೇಕಾಗಿದೆ. ಇಲ್ಲದಿದ್ದಲ್ಲಿ ಪಕ್ಷದ ಹಿತದೃಷ್ಟಿಯಿಂದ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಗ್ಗೆ ತಾವು ಉತ್ತರಿಸಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರ ಸೂಚನೆಯಂತೆ ನಗರ ಮಂಡಲದ ಅಧ್ಯಕ್ಷ ಶಿವಕುಮಾ‌ರ್ ಅವರು ಪಿ ಜಿ ಜಗನ್ನಿವಾಸ ರಾವ್ ಅವರಿಗೆ ನೋಟೀಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!